ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ

by Kundapur Xpress
Spread the love

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ

ಕುಂದಾಪುರ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.

ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಿತು.

ಸರ್ಕಾರಿ ಸೌಲಭ್ಯ ಒದಗಿಸುವುದಾಗಿ ಪಿಡಿಒ ಅವರು ಸುಮಾರು 400 ಅರ್ಜಿಗಳನ್ನು ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಅಧಿಕಾರಿಗಳು ಮಾಹಿತಿ ಪರಿಶೀಲಿಸಿದರು. ಬೇಳೂರು ಗ್ರಾ.ಪಂ. ವ್ಯಾಪ್ತಿಯ ಕಲ್ಲು ಕೋರೆಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಈ ಪರಿಶೀಲನಾ ಕಾರ್ಯಾಚರಣೆ ನಡೆದಿದ್ದು, ಪಂಚಾಯಿತಿಯ ವಿವಿಧ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

 

Related Articles

error: Content is protected !!