43
ತಿರುವನಂತಪುರಂ : ಮಲಯಾಳಂ ಚಿತ್ರರಂಗದ ಹಿರಿಯ ನಟ, ಹಾಸ್ಯ ಕಲಾವಿದ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಲೀಂ ಕುಮಾರ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

