227
ಉಡುಪಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ವಿದ್ಯಾ ಕುಮಾರಿ ಕೆ. ಅವರನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿಯಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ,, ಅಪರ ಜಿಲ್ಲಾಧಿಕಾರಿಗಳಾದ ವೀಣಾ ಉಪಸ್ಥಿತರಿದ್ದರು..

