Home » ಮಾದಕ ವಸ್ತು ಸೇವನೆ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ
 

ಮಾದಕ ವಸ್ತು ಸೇವನೆ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ

by Kundapur Xpress
Spread the love

ವಿಟ್ಲ : ಮಾದಕ ವಸ್ತು ಸೇವನೆ ಮಾಡಿ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಲ್ಲದೆ, ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ.

ಮಧ್ಯಾಹ್ನ ವಿಟ್ಲ ಪೊಲೀಸ್ ಉಪ ನಿರೀಕ್ಷಕರಾದ ಬಿ. ಎಸ್. ನಾಯಕ್ ಅವರು ತಮ್ಮ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಡೆಸುತ್ತಿದ್ದಾಗ, KA-19-HX-0497 ಸಂಖ್ಯೆಯ ಸ್ಕೂಟರ್‌ನಲ್ಲಿ ಬಂದ ಸವಾರ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿರುವುದು ಕಂಡುಬಂದಿದೆ.

ತಪಾಸಣೆಗಾಗಿ ಪೊಲೀಸರು ವಾಹನವನ್ನು ತಡೆದಾಗ, ಸವಾರನು ಉಪ ನಿರೀಕ್ಷಕರೊಂದಿಗೆ ಅತ್ಯಂತ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.

ಆರೋಪಿಯ ವರ್ತನೆಯಿಂದ ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ವಿಚಾರಿಸಿದಾಗ, ಆತ ಬಂಟ್ವಾಳ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಎಂದು ತಿಳಿದುಬಂದಿದೆ.

ತಾನು ಮಾದಕ ವಸ್ತು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದು, ವೈದ್ಯಕೀಯ ತಪಾಸಣೆಯಲ್ಲೂ ಅದು ದೃಢಪಟ್ಟಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ : 100/2026 ರಂತೆ NDPS ಕಾಯ್ದೆ, ಬಿಎನ್‌ಎಸ್ (BNS) ಮತ್ತು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

 

Related Articles

error: Content is protected !!