Home ಕರಾವಳಿ ಸುದ್ದಿMRPL ಸ್ಫೋಟ ಪ್ರಕರಣ : ಮೃತ ಮನೀಷ್ ಕರ್ಕಡ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ ಕಾರ್ಮಿಕರ ಆಗ್ರಹ

MRPL ಸ್ಫೋಟ ಪ್ರಕರಣ : ಮೃತ ಮನೀಷ್ ಕರ್ಕಡ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ ಕಾರ್ಮಿಕರ ಆಗ್ರಹ

MRPL Explosion Case: Workers Demand ₹1 Crore Compensation for Family of Deceased Manish Karkada

by Kundapur Xpress

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮನೀಷ್ ಕರ್ಕಡ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಗುರುವಾರ ಪ್ರತಿಭಟನೆ ನಡೆಸಿದರು.

ಎಂಆರ್‌ಪಿಎಲ್-ಒಎನ್‌ಜಿಸಿ ಕರ್ಮಚಾರಿ ಸಂಘ ಹಾಗೂ ಎಂಆರ್‌ಪಿಎಲ್ ಲೇಬರ್ ಯೂನಿಯನ್ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಕಾರ್ಮಿಕರು ಸಂಸ್ಥೆಯ ಮುಖ್ಯದ್ವಾರದ ಬಳಿ ಜಮಾಯಿಸಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟರು.

ಎಂಆರ್‌ಪಿಎಲ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಕುಟುಂಬಗಳಿಗೆ ತಲಾ ₹5 ಲಕ್ಷದವರೆಗೆ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಸಂಸ್ಥೆಯಲ್ಲಿ ವಿವಿಧ ಸಂದರ್ಭಗಳಲ್ಲಿ ಸಂಭವಿಸಿರುವ ಸಾವು-ನೋವುಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸ್ಥಳೀಯರಾಗಿದ್ದರೂ ಕಾರ್ಮಿಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಸಮಸ್ಯೆಗಳನ್ನು ನೇರವಾಗಿ ಆಲಿಸಲು ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು

Related Articles

Leave a Comment

This site uses Akismet to reduce spam. Learn how your comment data is processed.