ಬೆಂಗಳೂರು : ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ರವರನ್ನು ಮೈಸೂರಿನ ಫಾರ್ಮ್ ಹೌಸ್ ನಿಂದ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ ನಟ ದರ್ಶನ್ ಹಾಗೂ ಅವರ ಇಬ್ಬರು ಅಂಗರಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಎರಡು ದಿನಗಳ ಹಿಂದೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳಿ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕಂಡುಬಂದಿದ್ದು ಪೊಲೀಸರು ತನಿಖೆ ಕೈಗೊಂಡಾಗ ಮೃತದೇಹವು ಚಿತ್ರದುರ್ಗ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ರೇಣುಕಾ ಸ್ವಾಮೀ (35ವರ್ಷ) ಎಂದು ತಿಳಿದು ಬಂದಿದೆ
ನಟಿ ಪವಿತ್ರ ಗೌಡ ಎಂಬವರಿಗೆ ಕೊಲೆಯಾದ ರೇಣುಕಾ ಸ್ವಾಮೀ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಎನ್ನಲಾಗಿದ್ದು ಇದಕ್ಕೆ ಸಂಭಂಧಿಸಿದಂತೆ ಕೊಲೆ ನಡೆದಿದೆ ಎಂಬ ವಿಚಾರದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ