ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ. ಬಹುಕೋಟಿ ರೂಪಾಯಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ. ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ವರ್ಗಾವಣೆ ಪ್ರಕರಣದ ತನಿಖೆ ಸಂಬಂಧ ಬ್ಯಾಂಕ್ ಆಫ್ ಇಂಡಿಯಾದ ಮೂವರು ಉದ್ಯೋಗಿಗಳು ಹಾಗೂ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ