Home » ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ : ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನ
 

ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ : ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನ

by Kundapur Xpress
Spread the love

ಉಡುಪಿ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಗುಜರಾತಿನ ಆನಂದ ತಾಲೂಕಿನ ಕೈಲಾಸ್ ನಗರಿಯ ಭರತ್ ಕುಮಾ‌ರ್ ಖಡಯಾತ ಎಂಬವರ ಪುತ್ರ ಹೀರೇಂದ್ರ ಕುಮಾರ್ (34) ಬಂಧಿತ ಆರೋಪಿ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಕಳೆದ ನ.21ರಂದು ಇದೇ ಪ್ರಕರಣದಲ್ಲಿ ಆರೋಪಿಗಳಾದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ರೋಹಿತ್ ಮತ್ತು ಸಂತ್ರಿ ಮಲ್ಪೆಯ ಶಿಪ್‌ಯಾರ್ಡ್ ಸಹಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಇವರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಈ ಪ್ರಕರಣದ ತನಿಖೆ ಮಂದುವರಿಸಿದ ಪ್ರಕರಣದ ತನಿಖಾಧಿಕಾರಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ನೇತೃತ್ವದ ತಂಡ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ ಆಧಾರದ ಮೇಲೆ ಹೀರೇಂದ್ರ ಕುಮಾರ್‌ನನ್ನು ಡಿ.21ರಂದು ಬಂಧಿಸಿದೆ. ಈತ ಹಣಕ್ಕಾಗಿ ತನ್ನ ಹೆಸರಿನಲ್ಲಿ ಮೊಬೈಲ್ ಸಿಮ್ ತೆಗೆದು ಆರೋಪಿಗೆ ನೀಡಿದ್ದನು. ಈತನನ್ನು ಕೂಡ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ.

 

Related Articles

error: Content is protected !!