Home » ಬೆಳಗ್ಗಿನ ಜಾವ ಕಾನೂನು ಬಾಹಿರವಾಗಿ ಮದ್ಯ ಮಾರಾಟ
 

ಬೆಳಗ್ಗಿನ ಜಾವ ಕಾನೂನು ಬಾಹಿರವಾಗಿ ಮದ್ಯ ಮಾರಾಟ

by Kundapur Xpress
Spread the love

ಉಡುಪಿ ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಬೆಳಗ್ಗಿನ ಜಾವ ಕಾನೂನು ಬಾಹಿರವಾಗಿ ಮದ್ಯದ ಪೊಟ್ಟಣಗಳನ್ನು (ಸ್ಯಾಚೆಟ್‌) ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಉಡುಪಿ ನಗರ ಠಾಣೆಯ ಪೊಲೀಸರು ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದಾರೆ.

ಮುಂಜಾನೆ ಆರೋಪಿ ಕಂಟ್ಯಪ್ಪ ಮೇಥಿ ತನ್ನ ಸ್ಕೂಟರ್‌ನಲ್ಲಿ ಸಿಟಿ ಬಸ್ ನಿಲ್ದಾಣದ ಬಳಿ ಬಂದು, ಮದ್ಯದ ಪೊಟ್ಟಣಗಳನ್ನು ಯಾರಿಗೂ ಅನುಮಾನ ಬಾರದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಈ ವೇಳೆ ನಿಖರ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ ಆತನ ಬಳಿ ಇದ್ದ 4 ಲೀಟರ್ ಅಕ್ರಮ ಮದ್ಯ ಪತ್ತೆಯಾಗಿದ್ದು, ಮದ್ಯ ಹಾಗೂ ಸ್ಕೂಟರ್ ಅನ್ನು ಜಪ್ತಿ ಮಾಡಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

 

Related Articles

error: Content is protected !!