Home » ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ :ಪೊಲೀಸರ ದಾಳಿ
 

ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ :ಪೊಲೀಸರ ದಾಳಿ

by Kundapur Xpress
Spread the love

ಬೆಳ್ತಂಗಡಿ :ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿದೆ.

 

Related Articles

error: Content is protected !!