ಬೆಂಗಳೂರು : ಬಜೆಪಿಯ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಹಿನ್ನಲೆಯಲ್ಲಿ ಬಿಜೆಪಿಯ ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಆಯ್ಕೆಯಾಗಿದ್ದಾರೆ ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೇಲ್‌ನಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್ ಅಶೋಕ್ ಅವರ ಹೆಸರನ್ನು ಘೋಷಿಸಲಾಗಿದೆ
ಬಿಜೆಪಿಯ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿರುವುದರಿಂದ ಒಕ್ಕಲಿಗ ಸಮುದಾಯದ ನಾಯಕನಾದ ಹಿರಿಯ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿಯಾದ ಆರ್ ಅಶೋಕ್ ರವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬಂದಿದೆ
ಕೇಂದ್ರದ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ರಾಜ್ಯ ಸಭಾ ಸದಸ್ಯರಾದ ದುಶ್ಯಂತ್ ಗೌತಮ್ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಸ್ ಆರ್ ಬೊಮ್ಮಾಯಿ ಬಜೆಪಿಯ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಕೋಟ ಶ್ರೀನಿವಾಸ ಪೂಜಾರಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಶಾಸಕಾಂಗ ಪಕ್ಷದ ಸಭೆಯಿಂದ ಬಸವರಾಜ್ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳೆ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದಿದ್ದಾರೆ ಎಂದು ತಿಳಿದುಬಂದಿದೆ