ಮಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರವರು ರಾಜೀನಾಮೆ ಸಲ್ಲಿಸಿದ್ದಾರೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಇಂದು ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ ಎಂದ ಅವರು ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಟ ಸೇಟುಗಳನ್ನು ಗೆಲ್ಲಲು ಈಗಾಗಲೇ ಬಿಜೆಪಿಯಲ್ಲಿ ಸಿದ್ದತೆಯಾಗಿದೆ ಎಂದರು
ಇನ್ನೂ ಬಿಜೆಪಿಯಲ್ಲಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದು ಹಿರಿಯ ನಾಯಕ ವಿ ಸೋಮಣ್ಣನವರು ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ