ಮಂಗಳೂರು; ಸುರತ್ಕಲ್ ನಲ್ಲಿ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಆಚಾರಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ವೇಳೆ ನಡೆದ ಸುರತ್ಕಲ್ ಕಾನಾ ಸಮೀಪದ ದೀಪಕ್ ಬಾರ್ ನಲ್ಲಿ ಹಸನ್ ಮುಕ್ಷಿತ್ ಮತ್ತು ನಿಜಾಮ್ ಎಂಬಿಬ್ಬರು ಯುವಕರೊಂದಿಗೆ ಆರೋಪಿಗಳಿಗೆ ಜಗಳವಾಗಿತ್ತು. ನಂತರ ಮುಕ್ಷಿತ್ ಮತ್ತು ನಿಜಾಮ್ ಅವರಿಗೆ ಚೂರಿಯಿಂದ ಇರಿಯಲಾಗಿತ್ತು. ನಿಜಾಮ್ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು ಮುಕ್ಷಿತ್ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ, ಕೆ.ವಿ. ಅಲೆಕ್ಸ್ ಸುರತ್ಕಲ್ ಇಂದಿರಾ ಕಟ್ಟೆ ನಿವಾಸಿ ನಿತಿನ್ ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ ಕುಳಾಯಿ ಹೊನ್ನಕಟ್ಟೆ ನಿವಾಸಿ ಅರುಣ್ ಶೆಟ್ಟಿ ಎಂಬವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು.
ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಮತ್ತು ಅಶೋಕ್ ಎಂಬವರು ತಲೆ ಮರೆಸಿಕೊಂಡಿದ್ದರು. ಸದ್ಯ ಗುರುರಾಜ್‌ನ್ನು ಬಂಧಿಸಿರುವ ಪೊಲೀಸರು ತಲೆ ಮರೆಸಿಕೊಂಡಿರುವ ಅಶೋಕ್ ಗಾಗಿ ಹುಡುಕಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

