116
ಕನ್ನಡದ ಹೆಸರಾಂತ ಸಾಹಿತಿ , ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ (94) ವಯೋಸಹಜ ಖಾಯಿಲೆಯಿಂದ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹೆಸರಾಂತ ಕಾದಂಬರಿಗಳಿಂದ ಮನೆಮಾತಾಗಿದ್ದ ಭೈರಪ್ಪನವರು 2023 ರಲ್ಲಿ ಪದ್ಮಭೂಷಣ ಗೌರವಕ್ಕೆ ಪಾತ್ರರಾಗಿದ್ದರು. ಅಲ್ಲದೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹತ್ತು ಹಲವು ಪ್ರಶಸ್ತಿಗಳನ್ನು ಇವರು ಪಡೆದುಕೊಂಡಿದ್ದರು. ವಂಶವೃಕ್ಷ, ಜಲಪಾತ, ನಾಯಿ ನೆರಳು ಸೇರಿ 22 ಪ್ರಸಿದ್ಧ ಕಾದಂಬರಿಗಳನ್ನು ಇವರು ರಚಿಸಿದ್ದಾರೆ.
