Home ಬ್ರೇಕಿಂಗ್ ನ್ಯೂಸ್ಚಾಲಕನ ನಿಯಂತ್ರಣ ತಪ್ಪಿ‌ ರಸ್ತೆ ವಿಭಾಜಕ್ಕೆ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ‌ ರಸ್ತೆ ವಿಭಾಜಕ್ಕೆ ಡಿಕ್ಕಿ

by Kundapur Xpress

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಖಾಸಗಿ ಶಾಲಾ ಮಕ್ಕಳ ಬಸ್ಸ್ ಚಾಲಕನ ನಿಯಂತ್ರಣ ತಪ್ಪಿ‌ ರಸ್ತೆ ವಿಭಾಜಕಕ್ಕೆ ಡಿಕ್ಕಿಯಾದ ಘಟನೆ ಕೆ.ಎಫ್.ಸಿ ಬಳಿ ಸಂಭವಿಸಿದೆ.ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ ಇದಾಗಿದೆ. ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿವೈಡರ್ ಹಾಗೂ ಬಸ್ಸಿಗೆ ಹಾನಿಯಾಗಿದೆ.

ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles