109
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 2ರಂದು (ಬುಧವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

