Home » ಕುಂದಾಪುರ ತೆರಳುತ್ತಿದ್ದ ಶ್ರೀ ದುರ್ಗಾಂಬ ಖಾಸಗಿ ಬಸ್ನಲ್ಲಿ ಬೆಂಕಿ
 

ಕುಂದಾಪುರ ತೆರಳುತ್ತಿದ್ದ ಶ್ರೀ ದುರ್ಗಾಂಬ ಖಾಸಗಿ ಬಸ್ನಲ್ಲಿ ಬೆಂಕಿ

by Kundapur Xpress
Spread the love

ಶಿವಮೊಗ್ಗ: ಶಿವಮೊಗ್ಗದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಶ್ರೀ ದುರ್ಗಾಂಬ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ ಘಾಟಿಯ ಬಾಳೆಬರೇ ಫಾಲ್ಸ್ ಸಮೀಪ ನಡೆದಿದೆ.

ಚಲಿಸುತ್ತಿದ್ದ ವೇಳೆ ಬಸ್‌ನಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅರಿತ ಚಾಲಕ ಮತ್ತು ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಬಸ್ ಬಹುತೇಕ ಸುಟ್ಟು ಕರಕಲಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದರೂ, ನಂತರ ಪರಿಸ್ಥಿತಿ ಸಹಜಗೊಂಡಿದೆ.

 

Related Articles

error: Content is protected !!