ಬ್ರಹ್ಮಾವರ : ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೇಹಳ್ಳಿ ಎಂಬಲ್ಲಿ ನಡೆದಿದೆ ಹತ್ಯೆಗೆ ಒಳಗಾದ ಯುವಕ 36 ವರ್ಷ ಪ್ರಾಯದ ಕೃಷ್ಣ ಎಂದು ಗುರುತಿಸಲಾಗಿದೆ
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ ಹನೆಹಳ್ಳಿಯ ಮನೆಯಲ್ಲಿ ಕಳೆದ ರಾತ್ರಿ ಒಬ್ಬಂಟಿಯಾಗಿ ಊಟ ಮಾಡುತ್ತಿದ್ದ. ಈ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಕಳೆದ ರಾತ್ರಿ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿಕ್ಕಿ ಕೃಷ್ಣನನ್ನು ಹತ್ಯೆ ಮಾಡಿದ್ದ ಶಬ್ದವನ್ನು ನೆರೆ ಮನೆಯವರು ಪಟಾಕಿ ಸದ್ದು ಇರಬೇಕೆಂದು ಸುಮ್ಮನಾಗಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಬ್ರಹ್ಮಾವರ ವೃತ್ತ ನಿರೀಕ್ಷಕರಾದ ದಿವಾಕರ ಪಿ.ಎಂ, ಬ್ರಹ್ಮಾವರ ಠಾಣಾಧಿಕಾರಿ ಮಧು ಬಿ.ಇ. ಡಿ ವೈ ಎಸ್ ಪಿ ಬೆಳ್ಳಿಯಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ