Home » ಶ್ರೀಕೃಷ್ಣ ಮಠದ ಪಾರ್ಕಿಂಗ್ ವಿಚಾರವಾಗಿ ಮಾರಾಮಾರಿ
 

ಶ್ರೀಕೃಷ್ಣ ಮಠದ ಪಾರ್ಕಿಂಗ್ ವಿಚಾರವಾಗಿ ಮಾರಾಮಾರಿ

ಒಬ್ಬ ಆರೋಪಿಯ ಬಂಧನ

by Kundapur Xpress
Spread the love

ಉಡುಪಿ :  ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಪ್ರವಾಸಿಗರು ಮತ್ತು ಸ್ಥಳೀಯ ಕಾರು ಚಾಲಕರ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ಹಾಗೂ ಕೌಂಟರ್ ಕೇಸ್ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಹೈದರಾಬಾದ್‌ನ ರವೀಂದ್ರನಗರ ನಿವಾಸಿ ರಂಗ ರಾವ್ ಅವರು ಕುಟುಂಬ ಸಮೇತರಾಗಿ ಶ್ರೀಕೃಷ್ಣ ದೇವರ ದರ್ಶನಕ್ಕೆ ಆಗಮಿಸಿದ್ದ ವೇಳೆ, ಪಾರ್ಕಿಂಗ್ ಪ್ರದೇಶದಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಸ್ಥಳೀಯ ವ್ಯಕ್ತಿಗೆ ನಿಧಾನವಾಗಿ ವಾಹನ ಚಲಾಯಿಸುವಂತೆ ಸೂಚಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದ ಮಾತಿನ ಚಕಮಕಿ ನಡೆದು, ಕಾರಿನಲ್ಲಿದ್ದ ಕೋಲಿನಂತಹ ವಸ್ತುವಿನಿಂದ ಹಲ್ಲೆ ನಡೆಸಿ ತಲೆಗೆ ಗಾಯಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 71/2026 ದಾಖಲಿಸಲಾಗಿದೆ.

ಇದೇ ಘಟನೆಯ ಕುರಿತು ಸ್ಥಳೀಯ ನಿವಾಸಿ ಸುಪ್ರೀತ್ ಕುಮಾರ್ ಅವರು ನೀಡಿದ ಪ್ರತಿದೂರಿನಲ್ಲಿ, ಎದುರಿನ ವಾಹನದಲ್ಲಿದ್ದವರು ಫೋಟೋ ಸ್ಟ್ಯಾಂಡ್ ಹಾಗೂ ಕುರ್ಚಿಗಳಿಂದ ಹಲ್ಲೆ ನಡೆಸಿ, ತಮ್ಮ ಪತ್ನಿಯ ಮೇಲೂ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೆ ಕಬ್ಬಿಣದ ವಸ್ತುಗಳಿಂದ ಹಲ್ಲೆ ನಡೆಸಿ ಕಾರಿನ ಮುಂಭಾಗದ ಗಾಜು ಒಡೆದು ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರ ಪ್ರಕಾರ, ಈ ಎರಡೂ ಪ್ರಕರಣಗಳು ಕೇಸ್ ಮತ್ತು ಕೌಂಟರ್ ಕೇಸ್ ಆಗಿದ್ದು, ಪ್ರಕರಣವೊಂದರ ಆರೋಪಿ ಸುಪ್ರೀತ್ ಕುಮಾರ್ (40) ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ. ಉಡುಪಿ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Related Articles

error: Content is protected !!