Home » ಸೌಜನ್ಯ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ
 

ಸೌಜನ್ಯ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ

ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪ

by Kundapur Xpress
Spread the love

ಮಂಗಳೂರು: ಸೌಜನ್ಯ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ ಎಂದು ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್ ಕುಮಾರ್‌ಗೆ ದೂರು ಅರ್ಜಿ ಸಲ್ಲಿಸಿದ್ದಾರೆ.

ಸೋದರಮಾವ ವಿಠಲ ಗೌಡಗೆ ಸೌಜನ್ಯಳ ಮೇಲೆ ಕೆಟ್ಟ ದೃಷ್ಟಿ ಇತ್ತು ಆತ ಆಕೆಯನ್ನು ಬಳಸಿಕೊಳ್ಳಲು ಬಹಳ ಸಮಯದಿಂದ ಹವಣಿಸುತ್ತಿದ್ದ. ಒಪ್ಪದೇ ಇದ್ದಂತ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ ಗೌಡನ ಮೇಲೆ ಸಂಶಯವಿತ್ತು. ಸೌಜನ್ಯ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಸಂತೋಷ್ ರಾವ್ ಅವರನ್ನು ಈ ಕೃತ್ಯಕ್ಕೆ ಬಳಸಿಕೊಂಡಿರಬಹುದು. ಈ ಬಗ್ಗೆ ನಾನು ಬಹಳ ದಿನಗಳಿಂದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಸಂಪೂರ್ಣ ಮರುತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು. ವಿಠಲ ಗೌಡನ ಮಂಪರು ಪರೀಕ್ಷೆ ಮಾಡಬೇಕು. ಮಂಪರು ಪರೀಕ್ಷೆಯಿಂದ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ ಸಾಂದರ್ಭಿಕ ಸಾಕ್ಷಿಗಳನ್ನು ಇಟ್ಟುಕೊಂಡು ದಕ್ಷಿಣ ಕನ್ನಡ ಎಸ್ಪಿ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ದೂರಿನ ಮೂಲಕ ಮಂಪರು ಪರೀಕ್ಷೆ ಮಾಡಲು ಆಗ್ರಹಿಸಿದ್ದಾರೆ.

 

Related Articles

error: Content is protected !!