122
ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಎ.23ರ ಗುರುವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.
ಗುರುವಾರ ಮಧ್ಯಾಹ್ನ 12 ಗಂಟೆಗೆ 2026 ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ.
ಈ ಫಲಿತಾಂಶವನ್ನು https://karresults.nic.in KarnatakaOne Mobile App ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

