36
ಉಡುಪಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಪ್ರೀತಮ್ ಪೂಜಾರಿ ಸೇರಿ ಒಟ್ಟು ಏಳು ಮಂದಿ ಗರಿಷ್ಠ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.
ಪ್ರೀತಮ್ ಬಿದ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನಾ ದಂಪತಿಯ ಇಬ್ಬರ ಮಕ್ಕಳಲ್ಲಿ ಹಿರಿಯ ಮಗ. ತಂದೆ ಗಣಪತಿ ಅವರು ಶ್ರೀ ಲಕ್ಷ್ಮೀ ಎಕ್ಸ್ಪ್ರೆಸ್ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್. ತಾಯಿ ನಾಗರತ್ನಾ ಗೃಹಿಣಿ. ಎಲ್.ಕೆ.ಜಿ.ಯಿಂದಲೂ ಈತ ಮದರ್ ಥೆರೆಸಾ ಸಂಸ್ಥೆಯಲ್ಲಿ ಕಲಿಯುತ್ತಿದ್ದನು.

