Home » ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
 

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

by Kundapur Xpress
Spread the love

ಬಂಟ್ವಾಳ: ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.

ಕಾವಳಮೂಡೂರು ಗ್ರಾಮದ ಉಮಾವತಿ  ಆತ್ಮಹತ್ಯೆ ಮಾಡಿಕೊಂಡ ಮಹಿಳೆ 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು.

ಹಾಗಾಗಿ ಮಾನಸಿಕವಾಗಿ ನೊಂದು ಜೀವನದಲ್ಲಿ ಜುಗುಪ್ಸೆ ಹೊಂದಿದ್ದ ಇವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತರ ಕುಟುಂಬವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!