Home » ಗೆಳೆಯರಿಂದ ಬ್ಲಾಕ್‌ಮೇಲ್ : ಯುವಕ ಆತ್ಮಹತ್ಯೆ
 

ಗೆಳೆಯರಿಂದ ಬ್ಲಾಕ್‌ಮೇಲ್ : ಯುವಕ ಆತ್ಮಹತ್ಯೆ

by Kundapur Xpress
Spread the love

ಕಾರ್ಕಳ : ಯುವತಿ ಜತೆಗಿನ ಖಾಸಗಿ ವೀಡಿಯೋ ಗೆಳೆಯರಿಂದ ಬ್ಲಾಕ್‌ಮೇಲ್ ಒತ್ತಡ ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ಸಮೀಪ ಬೆಳ್ಮಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ಗುರುವಾರ ನಡೆದಿದೆ.

ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ.ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವೀಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.ಡೆತ್ ನೋಟ್‌ನಲ್ಲಿ ನಾಲ್ವರು ಬ್ಲಾಕ್‌ಮೇಲ್ ಮಾಡಿದವರ ಹೆಸರು ಉಲ್ಲೇಖಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ಯುವಕನ ಮೊಬೈಲ್ ಮತ್ತು ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

Related Articles

error: Content is protected !!