35
ವಿಟ್ಲ:ಕೊಲ್ನಾಡು ಗ್ರಾಮದ ಕುಳಾಲು ಮುಂಡಾಜೆ ಕಾನ ಎಂಬಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ದಿನೇಶ್ ಕೆ ಹೆಚ್ (36) ಮೃತ ಯುವಕ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಿನೇಶ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತ ದಿನೇಶ್ ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

