Home » ನೇಣು ಬಿಗಿದು ಆತ್ಮಹತ್ಯೆ
 

ನೇಣು ಬಿಗಿದು ಆತ್ಮಹತ್ಯೆ

by Kundapur Xpress
Spread the love

ಕುಂದಾಪುರ: ಮನೆಯಲ್ಲಿ ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ನಗರದ ಮಂಗಲಪಾಂಡೆ ರಸ್ತೆಯಲ್ಲಿ ಗುರುವಾರ ನಡೆದಿದೆ.

ಮಂಗಲಪಾಂಡೆ ರಸ್ತೆ ನಿವಾಸಿ ಕೌಶಿಕ್ ಬಾಯರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಈತ ಕುಂದಾಪುರ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

 

Related Articles

error: Content is protected !!