ಬ್ರಹ್ಮಾವರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಮೃತರನ್ನು ನರಸಿಂಹ (66) ಎಂದು ಗುರುತಿಸಲಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಶ್ರೀಕೃಷ್ಣ ಎಂಟರ್ ಪ್ರೈಸಸ್ ಎಂಬ ಲೇಬರ್ ಕಾಂಟ್ರಾಕ್ಟ್ ಸಂಸ್ಥೆಯನ್ನು ಸುಮಾರು 20 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದ ಇವರು ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ತಿಂಗಳಿಗೊಮ್ಮೆ ಊರಿಗೆ ಬಂದು ಹೋಗುತ್ತಿದ್ದರು. ಅವರು ವ್ಯವಹಾರದಲ್ಲಿ ಆರ್ಥಿಕವಾಗಿ ತೊಂದರೆಯಾದ ಬಗ್ಗೆ ಬಡ್ಡಿಗಾಗಿ ಹಣ ಪಡೆದು ವ್ಯವಹಾರ ನಡೆಸುತ್ತಿದ್ದು, ಸದ್ರಿ ಸಾಲಕ್ಕೆ ಕಳೆದ ಎರಡು ತಿಂಗಳಿನಿಂದ ಸರಿಯಾದ ಸಮಯಕ್ಕೆ ಬಡ್ಡಿಯನ್ನು ಪಾವತಿ ಮಾಡಲು ಸಾಧ್ಯವಾಗದ ಕಾರಣ, ಸಾಲದ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಅವರು ಬ್ರಹ್ಮಾವರದ ಆಶ್ರಯ ಲಾಡ್ಜ್ಗೆ ಬಂದು ರೂಮಲ್ಲಿ ಇದ್ದವರು ನಿನ್ನೆ ಸೀಲಿಂಗ್ ಫ್ಯಾನಿಗೆ ನೈಲಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಬ್ರಹ್ಮಾವರ ಠಾಣೆ ಅ.ಕ್ರ:66/2026 ಕಲಂ:108,3(5) ಬಿಎನ್ಎಸ್ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.

