Home » ಯುವತಿ ನೇಣು ಬಿಗಿದು ಆತ್ಮಹತ್ಯೆ
 

ಯುವತಿ ನೇಣು ಬಿಗಿದು ಆತ್ಮಹತ್ಯೆ

by Kundapur Xpress
Spread the love

ಶಂಕರನಾರಾಯಣ: ಬಾಡಿಗೆ ಮನೆಯಲ್ಲಿ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಳ್ಳಿಬೈಲು ಗ್ರಾಮದ ಅಶ್ವಿತಾ ಹುರಳಿ (21) ಎಂದು ಗುರುತಿಸಲಾಗಿದೆ. ಅವರು ತಮ್ಮ ತಂಗಿ ಸುಶ್ಮಿತಾ ಹುರಳಿ (18) ಅವರೊಂದಿಗೆ ಕಳೆದ ನಾಲ್ಕು ತಿಂಗಳಿನಿಂದ ಸಿದ್ದಾಪುರ ಗ್ರಾಮದ ಐರ್‌ಬೈಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅಶ್ವಿತಾ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಸುಶ್ಮಿತಾ ಎದ್ದು ನೋಡಿದಾಗ ಅಶ್ವಿತಾ ಕಾಣಿಸದಿದ್ದರಿಂದ ಕೋಣೆಯ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಅನುಮಾನಗೊಂಡ ಸುಶ್ಮಿತಾ ಕಿಚನ್ ರೂಮ್ ಗೋಡೆ ಹತ್ತಿ ಒಳಗೆ ಹೋಗಿ ನೋಡಿದಾಗ, ಅಶ್ವಿತಾ ಚೂಡಿದಾರ ಶಾಲ್‌ನಿಂದ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related Articles

error: Content is protected !!