237
ಕುಂದಾಪುರ : ತಾಲೂಕಿನ ಕೋಟೇಶ್ವರದಲ್ಲಿ ಶಿಕ್ಷಕಿಯೊಬ್ಬರ ಮನೆಯ ಗೊದ್ರೇಜ್ ನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳು ಕಳವಾಗಿರುವ ಬಗ್ಗೆ ವರದಿಯಾಗಿದೆ.
ಕೋಟೇಶ್ವರ ಆಟಕೆರೆ ಬಟ್ಟೆ ಅಂಗಡಿ ಎದುರಿನ ನಿವಾಸಿ, ಬಿದಲ್ ಕಟ್ಟೆಯ ಕೆಪಿಎಸ್ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಪೂಜಾ ಕಿಣಿ ಎಂಬವರು ಮನೆಯ ಗೊದ್ರೇಜ್ ನಲ್ಲಿ ಚಿನ್ನದ ಬ್ರಾಸ್ ಲೈಟ್, ಪವನ ಸರ, ಕೆಂಪು ಕಲ್ಲು ಮುತ್ತಿನ ಸೂರ್ಯಪೆಂಡೆಂಟ್, ಸಿಂಗಲ್ ಸ್ಕ್ರೂ ಬಳೆ, ಜುಮ್ಕಿ ಬಳೆ, ಕರಿಮಣಿ ನೆಕ್ಲೆಸ್ ,ಗೋಲ್ಡನ್ ಸಟೋನ್ ಪೆಂಡೆಂಟ್, ವೆಂಕಟರಮಣ ಪೆಂಡೆಂಟ್,ಡಿ ಸಿ ಚೈನ್ ,ನೆಕ್ಲೆಸ್ ,ಹಸಿರು ಗುಲಾಬಿ ಕಲ್ಲಿನ ಪೆಂಡೆಂಟ್, ಸಣ್ಣ ಹವಳದ ಸರ, ವಜ್ರದ ಮೂಗುಬೊಟ್ಟು,-2 ಇವುಗಳನ್ನು ಮನೆಯ ಗೊದ್ರೇಜ್ ನಲ್ಲಿ ಇರಿಸಿ ಬೀಗ ಹಾಕಿ ಬೀಗವನ್ನು ಅಲ್ಲಿಯೇ ಇಟ್ಟು ಹೋಗಿದ್ದು
ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ಹೋಗಲು ಗೊದ್ರೇಜ್ ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ನೋಡುವಾಗ ಕೆಲವು ಚಿನ್ನಾಭರಣಗಳು ಇಲ್ಲದಿರುವುದು ಗಮನಕ್ಕೆ ಬಂತು.

