Home » ದೈವಸ್ಥಾನ ಕಾಣಿಕೆ ಡಬ್ಬಿ ಕಳವು : ಆರೋಪಿ ಬಂಧನ
 

ದೈವಸ್ಥಾನ ಕಾಣಿಕೆ ಡಬ್ಬಿ ಕಳವು : ಆರೋಪಿ ಬಂಧನ

by Kundapur Xpress
Spread the love

ಉಡುಪಿ: ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆಬಂಧಿತನನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಈ ಹಿಂದೆಯೂ ವಿವಿಧ ದೇವಸ್ಥಾನಗಳ ಕಾಣಿಕೆ ಹುಂಡಿಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕೃತ್ಯಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅದರ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

 

Related Articles

error: Content is protected !!