Home » ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ : ಮಹಿಳೆ ಸ್ಥಳದಲ್ಲೇ ಸಾವು
 

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ : ಮಹಿಳೆ ಸ್ಥಳದಲ್ಲೇ ಸಾವು

by Kundapur Xpress
Spread the love

ಕೋಟ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.

ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಙಾಕ ಅವರ ಪತ್ನಿ ಅಲಿಮಾಬಿ (62) ಮೃತಪಟ್ಟ ದುರ್ದೈವಿ.

ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸೋಮವಾರ ರಾತ್ರಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ

 

Related Articles

error: Content is protected !!