250
ಕುಂದಾಪುರ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯು ತೀವ್ರವಾಗಿ ಹೆಚ್ಚಾಗುವುದರಿಂದ ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ನಾಳೆ ದಿನಾಂಕ 24-07-2025 ರಂದು ಗುರುವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರೌಢಶಾಲೆ ಪದವಿಪೂರ್ವ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ
ಉಳಿದಂತೆ ಎಲ್ಲಾ ಪದವಿ ಸ್ನಾತಕೋತ್ತರ ಪದವಿ ಡಿಪ್ಲೋಮೋ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

