704
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ ಅಗಸ್ಟ್ 01 ರಂದು ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತನ್ನ ಆದೇಶದಲ್ಲಿ ತಿಳಿಸಿದ್ದಾರೆ
ಅಗಸ್ಟ್ 01 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ

