317
ಕುಂದಾಪುರ : ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ದಿನಾಂಕ 13.06.2025 ರಂದು ಶುಕ್ರವಾರ ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾಗ್ರತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿಯವರು ಆದೇಶ ಹೊರಡಿಸಿದ್ದಾರೆ
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ

