Home » ಕೋಟ ನಕಲಿ ಐಟಿ ದಾಳಿ : ಇಬ್ಬರ ಬಂಧನ
 

ಕೋಟ ನಕಲಿ ಐಟಿ ದಾಳಿ : ಇಬ್ಬರ ಬಂಧನ

ಐಟಿ ನೆಪ ಮನೆಗೆ ನುಗ್ಗಿ ದರೋಡೆಗೆ ಯತ್ನ

by Kundapur Xpress
Spread the love

ಕೋಟ : ಪೊಲೀಸ್‌ ಠಾಣೆ ವ್ಯಾಪ್ತಿಯ ಕೋಟ ಮಣೂರು ಕರಿಕಲ್ ಕಟ್ಟೆ ಬಳಿಯ ಕವಿತಾ ಸುಧೀರ್ ಮನೆಯೊಂದಕ್ಕೆ ನುಗ್ಗಿ ದರೋಡೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನಿವಾಸಿ ಚಿಕ್ಕಮಗಳೂರಿನ ಸಂತೋಷ್ ನಾಯಕ್(45) ಮತ್ತು ಕಾಪು ಪೊಲಿಪು ನಿವಾಸಿ ದೇವರಾಜ್ ಸುಂದರ್ ಮೆಂಡನ್(46) ಬಂಧಿತ ಆರೋಪಿಗಳನ್ನು ಕೋಟ ಠಾಣೆಗೆ ಪೊಲೀಸರು ಕರೆತಂದಿದ್ದಾರೆ

ಘಟನೆ ವಿವರ:

ಜುಲೈ 25ರಂದು ಮಣೂರಿನ ಕವಿತಾರವರ ಎಂಬವರ ಮನೆಗೆ ನಕಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಶಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಐಟಿ ಇಲಾಖೆಯವರಂತೆ ಆಗಮಿಸಿದ ಸುಮಾರು 6-8 ಜನ ಅಪರಿಚಿತರು ಮನೆಗೆ ಅಕ್ರಮ ಪ್ರವೇಶಗೈದು ದಾಳಿಗೆ ಯತ್ನಿಸಿದರು.

ಆರೋಪಿಗಳ ಪತ್ತೆಗೆ ಕೋಟ ಠಾಣಾ ಪಿ.ಎಸ್.ಐ ಗುರುನಾಥ ಬಿ ಹಾದಿಮನಿ ಹಾಗೂ ಸುಧಾಪ್ರಭು ಮತ್ತು ಹಿರಿಯಡ್ಕ ಠಾಣಾ ಪಿಎಸ್‌ಐ ಮಂಜುನಾಥ ರವರನ್ನು ಒಳಗೊಂಡ ಪ್ರತ್ಯೇಕ 3 ತಂಡಗಳನ್ನು ರಚಿಸಲಾಗಿತ್ತು.

ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಜಪ್ತಿ ಮಾಡಿ, ಉಳಿದ ಆರೋಪಿತರ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತರು ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ಮಾಡುವ ಸಂಚು ರೂಪಿಸಿ ಮಹಾರಾಷ್ಟ್ರದಿಂದ ಬಂದಿರುತ್ತಾರೆ. ಇದಕ್ಕೆ ಜಿಲ್ಲೆಯ ಸ್ಥಳಿಯ ಆರೋಪಿತರು ಕೂಡ ಕೃತ್ಯದಲ್ಲಿ ಭಾಗಿಯಾಗಿರುತ್ತಾರೆಂದು ಪೊಲೀಸರು ತಿಳಿಸಿದ್ದಾರೆ.

   

Related Articles

error: Content is protected !!