Home » ಅಪ್ರಾಪ್ತ ಬಾಲಕನ ಅಪಹರಣ : ಇಬ್ಬರ ಬಂಧನ
 

ಅಪ್ರಾಪ್ತ ಬಾಲಕನ ಅಪಹರಣ : ಇಬ್ಬರ ಬಂಧನ

by Kundapur Xpress
Spread the love

ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಹಾಗೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬ್ರಹ್ಮಾವರ ಮೂಲದ ಬಾಲಕನನ್ನು ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಅಪಹರಿಸಿ, ಕೇರಳ ರಾಜ್ಯದ ತಲಪಾಡಿ ಸಮೀಪದ ಕುಂಜತ್ತೂರು ಪದವು ಪ್ರದೇಶದಲ್ಲಿರುವ ವುಡ್ ಕಂಪನಿಗೆ ಬಲವಂತವಾಗಿ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದರು.

ಬಾಲಕ ಮನೆಗೆ ಹೋಗುವುದಾಗಿ ಹೇಳಿದರೂ ಆರೋಪಿಗಳು ಅವಕಾಶ ನೀಡದೆ, ಜೂನ್ 9ರಂದು ತಂಗಿದ್ದ ಕೋಣೆಯಲ್ಲಿ ಸುಚಿತ್ ನಾಯಕ್ ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದೇ ವೇಳೆ ವಿಖ್ಯಾತ್ ಆಚಾರ್ಯ ಚೂರಿ ತೋರಿಸಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕೃತ್ಯವನ್ನು ಮತ್ತೊಬ್ಬ ಆರೋಪಿ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಲಕ ಮನೆಗೆ ಹೋಗುವುದಾಗಿ ಹೇಳಿದರೂ ಆರೋಪಿಗಳು ಅವಕಾಶ ನೀಡದೆ, ಜೂನ್ 9ರಂದು ತಂಗಿದ್ದ ಕೋಣೆಯಲ್ಲಿ ಸುಚಿತ್ ನಾಯಕ್ ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದೇ ವೇಳೆ ವಿಖ್ಯಾತ್ ಆಚಾರ್ಯ ಚೂರಿ ತೋರಿಸಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕೃತ್ಯವನ್ನು ಮತ್ತೊಬ್ಬ ಆರೋಪಿ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರಕರಣದ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19), ಸಾಲಿಕೇರಿ ವಾರಂಬಳ್ಳಿ ನಿವಾಸಿ ಹಾಗೂ ಸುಚಿತ್ ನಾಯಕ್ (20), ಮಟಪಾಡಿ ಗ್ರಾಮದ ನಿವಾಸಿಯನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಪ್ರಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿರುವುದರಿಂದ ಆತನನ್ನು ಬಾಲ ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

 

Related Articles

error: Content is protected !!