ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ಒಳಗಾಗಿಲ್ಲ ಆದರೆ ರಾಜ್ಯದಲ್ಲಿ ಬಿಜೆಪಿ ರಾಜಕೀಯ ದಿವಾಳಿಯಾಗಿದೆ ಎಂದು ಕೆಪಿಸಿಸಿ ಸಂಯೋಜಕ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ಮುಗಿಲುಮುಟ್ಟಿದೆ. ಬಿಜೆಪಿ ನಾಯಕರುಗಳಲ್ಲಿನ ಬಣ ಬಡಿದಾಟದಿಂದ ಈಗಾಗಲೇ ಬಿಜೆಪಿ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಪರಿಸ್ಥಿತಿಯಲ್ಲಿದೆ. ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಭರವಸೆ ನೀಡಿದ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗೂ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ಜೊತೆಯಲ್ಲಿ 2028 ರ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವುದನ್ನು ಅರಿತ ಬಿಜೆಪಿ ನಾಯಕರುಗಳು ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.
ಬಿಜೆಪಿ ನಾಯಕರು ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವ ಮೊದಲು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯ ಮಾಡಲಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.
ದಿವಾಳಿಯಾಗಿರುವುದು ರಾಜ್ಯ ಬಿಜೆಪಿ ಹೊರತು ಕಾಂಗ್ರೆಸ್ ಸರ್ಕಾರವಲ್ಲ
60
previous post
