ಜಡ್ಕಲ್ ವ್ಯ. ಸೇ. ಸ. ಸಂಘ, ನೂತನ ಕಟ್ಟಡ ಸಹಕಾರ ಸಿರಿ ಉದ್ಘಾಟನೆ
“ಕೃಷಿ ಸಾಲ ಮರುಪಾವತಿ ಮಾಡುವಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಕೃಷಿಕರಲ್ಲಿ ಯಾವುದೇ ಸಮಸ್ಯೆ ಎದುರಾದಲ್ಲಿ ನೇರವಾಗಿ ದೂರವಾಣಿ ಮೂಲಕ ತಮ್ಮನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು” ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರಕುಮಾರ್ ಹೇಳಿದರು.
ಇಲ್ಲಿನ ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ‘ಸಹಕಾರ ಸಿರಿ’ಯನ್ನು ಶುಕ್ರವಾರ ಅವರು ಉದ್ಘಾಟಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಜಡ್ಕಲ್ ಅಧ್ಯಕ್ಷತೆ ವಹಿಸಿದ್ದರು. ಭದ್ರತಾ ಕೊಠಡಿಯನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಪ್ರಧಾನ ಕಛೇರಿಯನ್ನು ಉದ್ಘಾಟಿಸಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿದರು,
ಸಭಾಭವನವನ್ನು ವೆ| ಮೂ| ಸೂರ್ಯನಾರಾಯಣ ಭಟ್ ಉದ್ಘಾಟಿಸಿದರು. ಜಡ್ಕಲ್ ಫೊರೋನ್ ಚರ್ಚ್ ಧರ್ಮಗುರು ವಂ| ಥೋಮಸ್ ಪಾರೆಕಾಟಿಲ್ ಪ್ರೇರಕರ ಕೊಠಡಿ ಉದ್ಘಾಟಿಸಿದರು. ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಎಸ್. ರಾಜು ಪೂಜಾರಿ ಬೈಂದೂರು, ಮಹೇಶ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಲ್ಯಾಡಿ ಮೋಹನದಾಸ್ ಶೆಟ್ಟಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಂಘದ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ, ಜಡ್ಕಲ್ ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಸಹಕಾರಿ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜಿ.ಎಸ್., ನಬಾರ್ಡ್ ಡಿ.ಡಿ.ಎಂ. ಸಂಗೀತಾ ಕರ್ತ, ಸಂಘದ ಉಪಾಧ್ಯಕ್ಷ ದೇವದಾಸ ವಿ.ಜೆ., ಸಿಇಒ ವೆಂಕಟರಮಣ ಶರ್ಮ, ಕರ್ಕುಂಜೆ ಹಾಗೂ ವಂಡ್ಸೆ ಸಹಕಾರಿ ಸಂಘದ ಅದ್ಯಕ್ಷರಾದ ಸುಧಾಕರ ಶೆಟ್ಟಿ ಬಾಂಡ್ಯ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಸಂಘದ ನಿರ್ದೇಶಕರಾದ ಸುರೇಂದ್ರ ನಾಯ್ಕ್, ಜೋಷಿ ಪಿ. ಪಿ., ಮಹಾಬಲ ಪೂಜಾರಿ, ಮುತ್ತ, ಮನೋಜ ಪಿ.ಜೆ., ನಾರಾಯಣ ಶೆಟ್ಟಿ, ಜೋಸೆಫ್ ಕೆ.ಎಂ., ವಿನೋದ ಜಾರ್ಜ್, ಗುರುರಾಜ ಪೂಜಾರಿ, ರೋಸಮ್ಮ, ಸವಿತಾ ಶೆಟ್ಟಿ, ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ. ಬ್ಯಾಂಕಿನ ಎಮ್. ಎನ್. ಡಾ| ರಾಜೇಂದ್ರಕುಮಾರ್‍ರವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ನಕ್ಷತ್ರ ನವೋದಯ ಸಂಘದ ಗುಂಪುಗಳನ್ನು ಸಾಂಕೇತಿಕವಾಗಿ ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಜಡ್ಕಲ್ ಸ್ವಾಗತಿಸಿ, ಪ್ರಾಸ್ತಾವಿಸಿದರು. ರೇವತಿ ಶೆಟ್ಟಿ ನಿರೂಪಿಸಿದರು. ನಿರ್ದೇಶಕ ವಿನೋದ ಜಾರ್ಜ್ ವಂದಿಸಿದರು.