ಕೋಟ: ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಶಾಲಾ ಎಸ್ಡಿಎಮ್ಸಿ ಅಧ್ಯಕ್ಷ ಜಯರಾಮ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಸಂಘಗಳ ಕಡತಗಳನ್ನು ಹಸ್ತಾಂತರಿಸಿದರು
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ರಾಮದಾಸ ನಾಯಕ ವಹಿಸಿದ್ದರು.
ರಾಜ್ಯಪಾಲರಾಗಿ ಮಣೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನ್ನಿಸ್ ಬಾಂಜ್ ರವರು ವಹಿಸಿ ಪ್ರತಿಜ್ಞಾ ವಿಧಿ ಬೋದಿಸಿರು.
ಸಭೆಯಲ್ಲಿ ಶಾಲಾ ಎಸ್ಡಿಎಮ್ಸಿ ಸದಸ್ಯರಾದ ರಾಘವೇಂದ್ರ ಉಪಸ್ಥಿತರಿದ್ದರು . ಶಿಕ್ಷಕರಾದ ಶ್ರೀಧರ ಶಾಸ್ತ್ರೀ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯಕ್ರಮವನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಾದ ದೀಶಾ ನಿರೂಪಿಸಿ ಪೂರ್ವಿ ವಂದಿಸಿದರು.