50
ಉಡುಪಿ: ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲು ಮಾಡಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸಾಜೀದ್ ಹಾಗೂ ಸೈಯದ್ ಸೈಫ್ ಅಹಮ್ಮದ್ ಎಂದು ಗುರುತಿಸಲಾಗಿದೆ
ಆರೋಪಿಗಳು ಮೃತ ವ್ಯಕ್ತಿಯ ಕುಟುಂಬಕ್ಕೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಪ್ರಕರಣದ ಹಿನ್ನೆಲೆ ಬಗ್ಗೆ ತನಿಖೆ ಮುಂದುವರಿದಿದೆ.

