ಕುಂದಾಪುರ : ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸೇವಾ, ಸುಶಾಸನ ಮತ್ತು ಬಡವರ ಕಲ್ಯಾಣದ ಆಡಳಿತದ 25 ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ, ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಕೋಟತಟ್ಟು ಅಂಗನವಾಡಿ ಕೇಂದ್ರದಲ್ಲಿ ಅಂಗನ್ ಉತ್ಸವ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ವಹಿಸಿದ್ದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ* ಅವರು, “ಅಧಿಕಾರಕ್ಕಾಗಿ ಅಲ್ಲ, ಸೇವೆಗಾಗಿಯೇ 25 ವರ್ಷ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಮೋದಿಜಿ ತೋರಿದ ಅಭಿವೃದ್ಧಿ ಮಾದರಿ ಇಂದು ಜಗತ್ತಿಗೇ ಮಾದರಿಯಾಗಿದೆ” ಎಂದರು.
ಶುಭ ಹಾರೈಸಿದ ಉಡುಪಿ ಚಿಕ್ಕಮಗಳೂರು *ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು, “ಮೋದಿಜಿ ಅವರ ನೇತೃತ್ವದಲ್ಲಿ ಅಂಗನವಾಡಿ ವ್ಯವಸ್ಥೆಗೆ ಹೊಸ ಆಯಾಮ ಸಿಕ್ಕಿದೆ. ಪೋಷಣ್ ಅಭಿಯಾನದ ಮೂಲಕ ಅಪೌಷ್ಟಿಕತೆ ಮುಕ್ತ ಭಾರತದ ಸಂಕಲ್ಪ ಸಾಕಾರವಾಗುತ್ತಿದೆ” ಎಂದರು.
ಮಾತನಾಡಿದ *ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ* ಅವರು, “ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ನಮ್ಮ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಕೆಲಸ ಈ ಅಭಿಯಾನದ ಮೂಲಕ ಆಗುತ್ತಿದೆ. ಶಾಲಾ ಮಕ್ಕಳಿಗೆ ಪೌಷ್ಟಿಕತೆ ಜೊತೆ ಸಂಸ್ಕಾರ ನೀಡುವುದೇ ವಿಕಸಿತ ಭಾರತದ ಅಡಿಪಾಯ” ಎಂದರು.
ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಉಪಾಧ್ಯಕ್ಷರಾದ ಕಾಡೂರು ಸುರೇಶ್ ಶೆಟ್ಟಿ, ಜ್ಯೋತಿ ಉದಯ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲ ಶೆಟ್ಟಿ, ಮಹಿಳಾ ಮೋರ್ಚಾ ಪ್ರಭಾರಿ ರೂಪಾ ಬಾಬು ಪೈ, ಅಭಿಯಾನದ ಸಹ ಸಂಚಾಲಕ ಸುರೇಂದ್ರ ಕಾಂಚನ್ ಸಂಗಮ್, ಕಿರಣ್ ಪೂಜಾರಿ ತೆಕ್ಕಟ್ಟೆ, ಸುನೀಲ್ ಶೆಟ್ಟಿ ಹೇರಿಕುದ್ರು, ಜಿ.ಪಂ ಮಾಜಿ ಸದಸ್ಯರಾದ ರಾಘವೇಂದ್ರ ಕಾಂಚನ್ ಬಾರಿಕೆರೆ, ಶ್ರೀಲತಾ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕೋಟ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಸತೀಶ್ ಕುಂದರ್, ರವೀಂದ್ರ ತಿಂಗಳಾಯ, ವಾಸು ಪೂಜಾರಿ, , ಜ್ಯೋತಿ, ಅಶ್ವಿನಿ,, ಸರಸ್ವತಿ, ರವಿ ಕಾಂಚನ್,, ರತ್ನಾಕರ ಪೂಜಾರಿ, ಅನಿಲ್ ಹಂದಟ್ಟು, ಪ್ರಶಾಂತ್ ಮಡ್ಪಾಡಿ,,ಸೇರಿದಂತೆ ಅನೇಕ ಪ್ರಮುಖರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲ್ಯಾನ್ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಶ್ವೇತಾ ಶ್ರೀನಿಧಿ ಉಪಾಧ್ಯಾಯ ವಂದಿಸಿದರು.
