ಬೆಂಗಳೂರು : ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಸೋಮವಾರ ನಡೆಯಲಿದೆ. ಭಾನುವಾರ ನಿಗದಿಯಾ ಗಿದ್ದ ಸಭೆ ಕೊನೆ ಕ್ಷಣದಲ್ಲಿ ರದ್ದಾಗಿತ್ತು. ಇದೀಗ ಸೋಮವಾರ ಸಂಜೆ ಸಭೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಪೈಕಿ 18ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.