ಬೆಂಗಳೂರು : ರಾಜ್ಯದಲ್ಲಿ ಆಡಳಿತಾರೂಢ ಹಾಗೂ ವಿರೋಧ ಪಕ್ಷಗಳ ನಡುವೆ ಇತ್ತೀಚೆಗೆ ಭಾರಿ ರಾಜಕೀಯ ಸಮರಕ್ಕೆ ಕಾರಣವಾಗಿದ್ದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬ್ಯಾಡಗಿಯ ಮೆಣಸಿನಕಾಯಿ ವ್ಯಾಪಾರಿ ಸೇರಿದಂತೆ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ವಿಧಾನಸೌಧ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಹಮ್ಮದ್ ಶಫಿ ನಾಶಿಪುಡಿ, ದೆಹಲಿ ಕಿಶನ್ ಗಂಜ್ ಮೊಹಮ್ಮದ್ ಇಲ್ತಾಜ್ ಹಾಗೂ ಶಿವಾ ಜಿನಗರದ ಜಯಮಹಲ್ನ ಮುನಾವರ್ ಅಹ್ಮದ್ ಬಂಧಿತರು