ರಾಂಚಿ: ಭ್ರಷ್ಟಾಚಾರ ಪ್ರಕರಣದ ಸಂಬಂಧ ಜಾರ್ಖಂಡ್‌ನ ಜೆಎಂಎಂ ನಾಯಕ ಹೇಮಂತ್ ಸೊರೇನ್ ಬಂಧನವಾದ ಬೆನ್ನಲ್ಲೇ, ಜೆಎಂಎಂ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯ ದರ್ಶಿಯ ಮನೆಯ ಕೆಲಸದವನ ಬಳಿ 30 ಕೋಟಿ ರು. ಹಣದ ರಾಶಿಯೇ ಪತ್ತೆ ಆಗಿರುವುದು ಸಂಚಲನಕ್ಕೆ ಕಾರಣವಾಗಿದೆ.
ಜಾರ್ಖಂಡ್‌ನ ಅಧಿಕಾರಿಯೊಬ್ಬರ ಮೇಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ಜಾರಿನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಸೋಮವಾರ ಆಲಂ ಆಪ್ತ ಅಧಿಕಾರಿಯ ಮನೆ ಕೆಲಸದವರ ಮನೆ ಮೇಲೆ ದಾಳಿ ನಡೆಸಿದಾಗ ಬೆಚ್ಚಿ ಬೀಳಿ ಸುವಷ್ಟು ನಗದು ಸಿಕ್ಕಿದೆ. ಅಲ್ಲದೆ, ಭಾರೀ ಪ್ರಮಾಣದ ಚಿನ್ನಾಭರಣ ಮತ್ತು ಇತರೆ ಮಹತ್ವದ ದಾಖಲೆಗಳು ಲಭ್ಯವಾಗಿವೆ. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದು ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಜಾರ್ಖಂಡ್‌ನ ಗ್ರಾಮೀಣಾಭಿ ವೃದ್ಧಿ ಇಲಾಖೆಯ ಮಾಜಿ ಮುಖ್ಯ ಎಂಜಿನಿಯರ್ ವೀರೇಂದ್ರ ಕುಮಾರ್‌ರಾಮ್ ಅವರನ್ನು ಕಳೆದ ವರ್ಷ ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಇ.ಡಿ. ಅಧಿಕಾರಿಗಳು ಬಂಧಿಸಿದ್ದರು