205
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕದಂಬೋತ್ಸವಕ್ಕೆ ಚಾಲನೆ ನೀಡಲು ಮಂಗಳವಾರ ಬನವಾಸಿಗೆ ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಸಿಸಿಬಿ, ಪೊಲೀಸರು ಹಾಗೂ ಎನ್ ಐ ಎ ನವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ತನಿಖೆ ಚುರುಕಾಗಿ ನಡೆಯುತ್ತಿದೆ. ಐವರ ಬಂಧನವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟಕ್ಕೆ ಸಂಬಂಧಿಸಿ ಕೆಲವು ಸುಳಿವುಗಳು ಕೂಡಾ ಸಿಕ್ಕಿವೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ನನಗೆ ಇಲ್ಲ ಎಂದು ಸಿದ್ದ್ರಾಮಯ್ಯ ತಿಳಿಸಿದ್ದಾರೆ

