ಹೊನ್ನಾವರ : ಪಟ್ಟಣದಲ್ಲಿ ಟಿಪ್ಪರ್ ಚಾಲಕರೊಬ್ಬರು ಹೆಲೈಟ್ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು 500 ದಂಡ ವಿಧಿಸಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪೊಲೀಸರು ದಂಡ ವಿಧಿಸಿರುವ ರಶೀದಿ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಹೆಜ್ಜೆಟ್ ಧರಿಸಿಲ್ಲ ಎಂದು ಟಿಪ್ಪರ್ ಚಾಲಕ ಚಂದ್ರಕಾಂತ ಎಂಬವರಿಗೆ 500 ದಂಡ ಹಾಕಿದ್ದಾರೆ ಎಂದು ಹೇಳಲಾಗಿದೆ. ಹೊನ್ನಾವರದಲ್ಲಿ ಟಿಪ್ಪರ್‌ಮಾಲೀಕ ತನ್ನ ವಾಹನವನ್ನು ಮರಳು ಸಾಗಾಟಕ್ಕೆ ಕಳುಹಿಸಿದ್ದ. ಈ ವೇಳೆ ಟಿಪ್ಪರ್ ತಡೆದ ಹೊನ್ನಾವರ ಪೊಲೀಸರು ಚಾಲಕ ಚಂದ್ರಕಾಂತ ಎಂಬವರಿಂದ 500 ದಂಡ ವಸೂಲಿ ಮಾಡಿದ್ದಾರೆ. ರಶೀದಿ ನೋಡಿದ ಚಾಲಕನಿಗೆ ಆಘಾತ ಆಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪಿಎಸ್‌ಐ ಸಂತೋಷ್ ಕುಮಾರ್, ಟಿಪ್ಪರ್ ಚಾಲಕ ಸಮವಸ್ತ್ರ ಧರಿಸಿರಲಿಲ್ಲ. ಹೀಗಾಗಿ 500 ದಂಡ ವಿಧಿಸಲಾಗಿದೆ. ಆದರೆ ಕಣ್ಣಪ್ಪಿನಿಂದ ಹೆಲೈಟ್ ಧರಿಸದ್ದರಿಂದ ದಂಡ ಎಂದು ರಶೀದಿ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.