ಕಾರವಾರ : ಕೊನೆಗೂ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತ ಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.
ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಲು ಹಲವು ಕಾರಣಗಳಿವೆ ವಿಧಾನಸಭೆ ಚುನಾವಣೆಯಲ್ಲಿ ಅನಂತ ಕುಮಾರ ಹೆಗಡೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಬರಲಿಲ್ಲ. ಇದು ಕಾರವಾರ, ಶಿರಸಿ, ಹಳಿಯಾಳ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು ಎಂಬ ಅಭಿಪ್ರಾಯ ವ್ಯಾಪಕವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಂಕೋಲಾಕ್ಕೆ ಪ್ರಚಾರಕ್ಕೆ ಬಂದಾಗಲೂ ಹೆಗಡೆ ಅತ್ತ ಸುಳಿಯಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಹೆಗಡೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸುವುದಕ್ಕಿಂತ ಪರೋಕ್ಷವಾಗಿ ಕಾಂಗ್ರೆಸ್ ಪರವಾಗಿ ನಿಂತರು ಎನ್ನುವ ಆರೋಪ ಕೇಳಿ ಬಂದಿತ್ತು