ಕುಂದಾಪುರ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP ) ಕುಂದಾಪುರ ತಾಲ್ಲೂಕಿನವರ ನೇತೃತ್ವದಲ್ಲಿ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಪ್ರತಿಭಟಿನೆ ಶಾಸಕರಿಗೆ ಮನವಿ ನೀಡಲಾಯಿತು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದನ್ನು ಖಂಡಿಸಿ, ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಗಳನ್ನು ಸುಮಾರು 19ಕ್ಕೂ ಹೆಚ್ಚು ಮಾರ್ಗಗಳಲ್ಲಿ ಕಲ್ಪಿಸಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರಿಗೆ ಎಬಿವಿಪಿ ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ, ಸಹ ಸಂಚಾಲಕ ದರ್ಶನ್ ಶೆಟ್ಟಿ, ಹಾಗೂ ವಿದ್ಯಾರ್ಥಿಗಳೊಂದಿಗೆ ಶಾಸಕರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಕಾಡೂರು, ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಉಪಸ್ಥಿತರಿದ್ದರು.