Home » ಕಾರು ಮರಕ್ಕೆ ಢಿಕ್ಕಿ ಯುವತಿ ಸಾವು
 

ಕಾರು ಮರಕ್ಕೆ ಢಿಕ್ಕಿ ಯುವತಿ ಸಾವು

by Kundapur Xpress
Spread the love

ಕುಂದಾಪುರ : ತೆಕ್ಕಟ್ಟೆ ಸಮೀಪದ ಗುಡ್ಡೆಅಂಗಡಿ ರಾ.ಹೆ.  ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಘಟನೆ ಶನಿವಾರ  ಸಂಭವಿಸಿದೆ.

ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರುಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ಸ್ನೇಹಿತರಾದ ವಿಶ್ವೇಶ್ (28), ಚೇತನ್ (28), ಐಶ್ವರ್ಯಾ (27), এক্স (26) ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು.

   

Related Articles

error: Content is protected !!