Home » ಲಾರಿ ಆಟೋ ರಿಕ್ಷಾಕ್ಕೆ ಢಿಕ್ಕಿ:ಚಾಲಕ ಸಾವು
 

ಲಾರಿ ಆಟೋ ರಿಕ್ಷಾಕ್ಕೆ ಢಿಕ್ಕಿ:ಚಾಲಕ ಸಾವು

by Kundapur Xpress
Spread the love

ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಸಂಭವಿಸಿದೆ.ಮೃತರನ್ನು ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಎಂದು ಗುರುತಿಸಲಾಗಿದೆ.
ರಫೀಕ್  ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರಫೀಕ್ ಅವರನ್ನು ಕೂಡಲೇ ಸ್ಥಳೀಯರು ಅಸ್ಪತ್ರೆಗೆ ಸಾಗಿಸಿದ್ದು, ಈ ವೇಳೆ ಮೃತಪಟ್ಟಿದ್ದಾರೆ ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!